ನವದೆಹಲಿ: ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಉಡುಪಿಯ ಶ್ರೀ ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.
ಈ ವಿಶೇಷ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ಪೂಜ್ಯ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ಆಚರಣೆಯ ಅಧಿಕೃತ ಲೋಗೋವನ್ನು ಅನಾವರಣಗೊಳಿಸಿದರು. ಭಕ್ತಿ, ಆಧ್ಯಾತ್ಮ, ಶಿಕ್ಷಣ ಹಾಗೂ ಸಮಾಜಸೇವೆಯಲ್ಲಿ ಅಭೂತಪೂರ್ವ ಕೊಡುಗೆ ನೀಡಿದ ಶ್ರೀ ವಿಶ್ವೇಶತೀರ್ಥರ ಜೀವಮಾನದ ಸಾಧನೆಗಳನ್ನು ಸ್ಮರಿಸುವ ನಿಟ್ಟಿನಲ್ಲಿ ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ.
ಇದೇ ಸಂದರ್ಭದಲ್ಲಿ ಪೇಜಾವರ ಶ್ರೀಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಂಪ್ರದಾಯಿಕ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಿರೀಟ ತೊಡಿಸಿ, ಚಿನ್ನದ ಲೇಪಿತ ಶ್ರೀಕೃಷ್ಣನ ವಿಗ್ರಹ ಹಾಗೂ ಮಂತ್ರಾಕ್ಷತೆ ನೀಡಿ ಶುಭ ಹಾರೈಸಿದರು.

