ಕಣಿಯೂರು: ಇಲ್ಲಿನ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಪದ್ಮುಂಜ ಗಣೇಶ್ ಮೆಡಿಕಲ್ಸ್ ಮಾಲೀಕರಾದ ವಿಠಲ್ ಶೆಟ್ಟಿ ಅವರ ಪುತ್ರ ಮಾಸ್ಟರ್ ಉಜ್ವಲ್ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು.
ಉಜ್ವಲ್ ಅವರ ಜನ್ಮದಿನದ ಅಂಗವಾಗಿ ಕೇಂದ್ರದ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಾಗೂ ಉಪಹಾರವನ್ನು ವಿತರಿಸಿ, ಅವರೊಂದಿಗೆ ಸಂತೋಷವನ್ನು ಹಂಚಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಪಾಲನಾ ಕೇಂದ್ರದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಉಜ್ವಲ್ ಅವರಿಗೆ ಜನ್ಮದಿನದ ಶುಭಾಶಯ ಕೋರಿ ಆಶೀರ್ವದಿಸಿದರು.
