ಜಾಲ್ಸೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸೆಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸುಳ್ಯ ತಾಲೂಕು ಮಟ್ಟದ 17 ವರ್ಷದೊಳಗಿನ ಪ್ರೌಢಶಾಲಾ ವಿಭಾಗದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜಾಲ್ಸೂರು ವಿನೋಭಾನಗರದ ವಿವೇಕಾನಂದ ವಿದ್ಯಾಸಂಸ್ಥೆಯ ತಂಡ ದ್ವಿತೀಯ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದೆ.
ಅತ್ಯುತ್ತಮ ಪ್ರದರ್ಶನ ನೀಡಿದ ಶಾಲೆಯ ಐವರು ಆಟಗಾರ್ತಿಯರಾದ ಸಹನಾ, ಹೇಮಾನ್ಯ, ಹೇಮಶ್ರೀ, ಸಾತ್ವಿ ಹಾಗೂ ದಿಶಾ ಅವರು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ, ಪಂದ್ಯಾವಳಿಯುದ್ದಕ್ಕೂ ಸರ್ವಾಂಗೀಣ ಆಟ ಪ್ರದರ್ಶಿಸಿದ ಸಹನಾ 'ಉತ್ತಮ ಆಲ್ ರೌಂಡರ್' ವೈಯಕ್ತಿಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ತಂಡದ ಈ ಸಾಧನೆಗೆ ಕಾರಣರಾದ ತರಬೇತುದಾರರಿಗೆ ಹಾಗೂ ವಿಜೇತ ಕ್ರೀಡಾಪಟುಗಳಿಗೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದ ಮತ್ತು ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

