ದಕ್ಷಿಣ ಕನ್ನಡ

ಬೆಳ್ತಂಗಡಿ: ನರೇಂದ್ರ ಮೋದಿ ಜನ್ಮದಿನಾಚರಣೆ - ನಂದಗೋಕುಲ ಗೋಶಾಲೆಗೆ ಯುವಮೋರ್ಚಾದಿಂದ ಗೋಗ್ರಾಸ ಸಮರ್ಪಣೆ



ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾದ 'ಸೇವಾ ಸಂಕಲ್ಪ' ಅಭಿಯಾನದ ಭಾಗವಾಗಿ, ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ವಿಶೇಷ ಸೇವಾ ಕಾರ್ಯಕ್ರಮ ನಡೆಯಿತು.

​ತಾಲೂಕಿನ ಕಳೆಂಜ ಗ್ರಾಮದ ನಂದಗೋಕುಲ ಗೋಶಾಲೆಯ ಗೋವುಗಳ ಮೇವಿನ (ಗೋಗ್ರಾಸ) ವೆಚ್ಚಕ್ಕಾಗಿ ಯುವಮೋರ್ಚಾ ವತಿಯಿಂದ ₹10,506 ಧನಸಹಾಯ ಹಸ್ತಾಂತರಿಸಲಾಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶವನ್ನು ಯಶಸ್ವಿಯಾಗಿ ಮುನ್ನಡೆಸುವ ಶಕ್ತಿ, ಆಯುರಾರೋಗ್ಯ ಹಾಗೂ ಸಮೃದ್ಧಿ ಲಭಿಸಲೆಂದು ಗೋಮಾತೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

​ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಗೌಡ (ಕಡಮ್ಮಾಜೆ ಫಾರ್ಮ್ಸ್ ಮೊಗ್ರು) ಮತ್ತು ವಿನೀತ್ ಕೋಟ್ಯಾನ್ ಸಾವ್ಯ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ ಹಾಗೂ ಮಂಡಲದ ವಿವಿಧ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.



image