ದಕ್ಷಿಣ ಕನ್ನಡ

ಮಂಗಳೂರು : ಪಣಂಬೂರು ಎಂಸಿಎಫ್ ಬಳಿ ನಿಯಂತ್ರಣ ತಪ್ಪಿ ಬಿದ್ದ ಖಾಸಗಿ ಬಸ್: ಪ್ರಯಾಣಿಕನಿಗೆ ಗಾಯ



ಮಂಗಳೂರು: ಕಾರ್ಕಳದಿಂದ ಮಂಗಳೂರು ನಗರದ ಕಡೆಗೆ ಬರುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್‌ನ ಚಾಲಕನ ಅಜಾಗರೂಕತೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಮೀಪ ಬಸ್ ಚರಂಡಿಗೆ ಉರುಳಿಬಿದ್ದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಈ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಬೆಳ್ಳಣ್ ಮೂಲದ ಆದಿತ್ಯ ಎಂಬ ಪ್ರಯಾಣಿಕ ಗಾಯಗೊಂಡಿದ್ದಾರೆ.

​ಶುಕ್ರವಾರ ಬೆಳಿಗ್ಗೆ 6.30ಕ್ಕೆ ಕಾರ್ಕಳದಿಂದ ಪಯಣ ಆರಂಭಿಸಿದ್ದ 'ವಿಶಾಲ್ ಮೋಟರ್ಸ್' ಸಂಸ್ಥೆಯ ಎಕ್ಸ್‌ಪ್ರೆಸ್ ಬಸ್, ಸುಮಾರು 8.30ರ ವೇಳೆಗೆ ಮಂಗಳೂರು ನಗರ ಹೊರವಲಯದ ಪಣಂಬೂರಿನ ಎಂಸಿಎಫ್ ರೈಲ್ವೆ ಗೇಟ್ ಬಳಿ ತಲುಪಿದ್ದಾಗ ಈ ದುರಂತ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಬಸ್ ರಸ್ತೆಯಿಂದ ಪಕ್ಕಕ್ಕೆ ಜಾರಿ ಬದಿಯಲ್ಲಿದ್ದ ಚರಂಡಿಗೆ ಬಿದ್ದಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

​5೦ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್:

ಅಪಘಾತದ ಸಮಯದಲ್ಲಿ ಬಸ್‌ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಪಯಣಿಸುತ್ತಿದ್ದರು. ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಹಾಗೂ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ, ಬಸ್‌ನೊಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರತರಲು ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದ್ದು, ಗಾಯಾಳು ಪ್ರಯಾಣಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.



image