ಜಿಲ್ಲೆ

ಅರಸೀಕೆರೆ : ಯಡವನಹಳ್ಳಿಯಲ್ಲಿ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ, ಮಹಾಬಲ ಕುಲಾಲ್ ಚಾಲನೆ



ಅರಸೀಕೆರೆ: ತಾಲ್ಲೂಕಿನ ಗಂಡಸಿ ವಲಯಕ್ಕೆ ಒಳಪಡುವ ಯಡವನಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಪದಾಧಿಕಾರಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

​ಕಾರ್ಯಕ್ರಮವನ್ನು ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಅವರು ಉದ್ಘಾಟಿಸಿ ಮಾತನಾಡಿ, "ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಒಕ್ಕೂಟಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಪ್ರತಿಯೊಬ್ಬ ಪದಾಧಿಕಾರಿಯೂ ತಮ್ಮ ಜವಾಬ್ದಾರಿಯನ್ನು ಅರಿತು ಸಂಸ್ಥೆಯ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವ ಕೆಲಸ ಮಾಡಬೇಕು" ಎಂದು ಒಕ್ಕೂಟದ ಮಹತ್ವ ಹಾಗೂ ಯೋಜನೆಯ ಕಾರ್ಯಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.



​ಇದೇ ಸಂದರ್ಭದಲ್ಲಿ ತಾಲ್ಲೂಕಿನ ಯೋಜನಾಧಿಕಾರಿ ಅಕ್ಷತಾ ರೈ, ವಿಮಾ ವಿಭಾಗದ ಸಮನ್ವಯಾಧಿಕಾರಿ ಶಿವಕುಮಾರ್ ಹಾಗೂ ಜಿಲ್ಲಾ ಆಡಿಟ್ ಮ್ಯಾನೇಜರ್ ಅರುಣ್ ಕುಮಾರ್ ಅವರು ಪದಾಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ಮತ್ತು ಮಾಹಿತಿ ನೀಡಿದರು.

​ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ಸುನೀತಾ ಮತ್ತು ಸೀತಾರಾಮ್ ಸೇರಿದಂತೆ ವಲಯದ ವಿವಿಧ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.



image