ಮೊಗ್ರು: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದಲ್ಲಿ ಬುಧವಾರ (ಸೆ. 17) ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಸಂಕ್ರಮಣ ಪರ್ವ ಸೇವೆಯ ಸುಮುಹೂರ್ತದಲ್ಲಿ ದೈವಸ್ಥಾನದಲ್ಲಿ ನೆರೆದ ಭಕ್ತಾದಿಗಳು ಪ್ರಧಾನಿ ಮೋದಿ ಅವರಿಗೆ ಉತ್ತಮ ಆಯುಷ್ಯ, ಆರೋಗ್ಯ ದೊರೆಯಲಿ ಹಾಗೂ ದೇಶವನ್ನು ಮತ್ತಷ್ಟು ಪ್ರಗತಿಯತ್ತ ಮುನ್ನಡೆಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದರು.
ಈ ಶುಭ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರರು, ಭಾರತೀಯ ಜನತಾ ಪಾರ್ಟಿಯ ಹಿರಿಯ ಹಾಗೂ ಕಿರಿಯ ಮುಖಂಡರು, ಪ್ರಧಾನಿ ಮೋದಿ ಅವರ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
