ದಕ್ಷಿಣ ಕನ್ನಡ

ಬೆಳ್ತಂಗಡಿ : ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: ಬಡಕೋಡಿ ಹಾಗೂ ಕಣಿಯೂರು ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ



​ಬೆಳ್ತಂಗಡಿ: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ತಾಲೂಕಿನ ವಿವಿಧೆಡೆ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿ ಶುಭ ಕೋರಿದ್ದಾರೆ.

​ಬಡಕೋಡಿ ಆದಿಶಕ್ತಿ ದೇವಸ್ಥಾನದಲ್ಲಿ ಪ್ರಾರ್ಥನೆ

ನಾರಾವಿ ಮಹಾಶಕ್ತಿ ಕೇಂದ್ರದ ಬಡಕೋಡಿ ಶಕ್ತಿ ಕೇಂದ್ರದ ನೇತೃತ್ವದಲ್ಲಿ ಬಡಕೋಡಿ ಗ್ರಾಮದ ಶ್ರೀ ಆದಿಶಕ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು. ಪ್ರಧಾನಿ ಮೋದಿ ಅವರಿಗೆ ಸುದೀರ್ಘ ಆಯುಷ್ಯ, ಉತ್ತಮ ಆರೋಗ್ಯ ಸಿಗಲಿ ಹಾಗೂ ದೇಶವನ್ನು ಮತ್ತಷ್ಟು ಪ್ರಗತಿಯತ್ತ ಮುನ್ನಡೆಸುವ ಶಕ್ತಿ ಲಭಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿ, ಪ್ರಸಾದ ಸ್ವೀಕರಿಸಲಾಯಿತು.

​ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಬಿಜೆಪಿ ಪಕ್ಷದ ಪ್ರಮುಖರು, ಪ್ರಧಾನಿ ಮೋದಿ ಅವರ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

​


ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಸನ್ನಿಧಿಯಲ್ಲಿ ಸರ್ವಸೇವೆ

ಇನ್ನೊಂದೆಡೆ, ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲೂ ಪ್ರಧಾನಿ ಜನ್ಮದಿನದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಪ್ರಧಾನಿಯವರ ಯೋಗಕ್ಷೇಮಕ್ಕಾಗಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಸರ್ವಸೇವೆ ನೆರವೇರಿಸಿ ಮಹಾಪ್ರಸಾದ ಸ್ವೀಕರಿಸಲಾಯಿತು.

​ಈ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಸಮಿತಿಯ ಸದಸ್ಯರು, ಸ್ಥಳೀಯ ಬಿಜೆಪಿ ಮುಖಂಡರು, ಪ್ರಮುಖರು ಹಾಗೂ ಊರಿನ ಭಕ್ತಾದಿಗಳು ಭಾಗವಹಿಸಿದ್ದರು.



image