ದಕ್ಷಿಣ ಕನ್ನಡ

ಕಾರ್ಕಳ : ಸಾಣೂರು ಜಂಕ್ಷನ್ ಬಳಿ ಭೀಕರ ಅಪಘಾತ: ಮಾಜಿ ಸಚಿವ ರಮಾನಾಥ ರೈ ಕಾರಿಗೆ ಖಾಸಗಿ ಬಸ್ ಡಿಕ್ಕಿ, ಹಲವರಿಗೆ ಗಾಯ



ಕಾರ್ಕಳ: ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ. ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ಸು ಮುಖಾಮುಖಿ ಡಿಕ್ಕಿಯಾದ ಗಂಭೀರ ಘಟನೆ ಭಾನುವಾರ ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದೆ.

​ಕಾರ್ಕಳದಿಂದ ಮೂಡುಬಿದಿರೆ ಮಾರ್ಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್, ರಮಾನಾಥ ರೈ ಅವರಿದ್ದ ಕಾರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

​


ಘಟನೆಯಲ್ಲಿ ಮಾಜಿ ಸಚಿವ ರಮಾನಾಥ ರೈ ಹಾಗೂ ಅವರ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸಿದ ತಕ್ಷಣವೇ ಸ್ಪಂದಿಸಿದ ಸ್ಥಳೀಯರು, ಗಾಯಾಳುಗಳನ್ನು ವಾಹನಗಳಿಂದ ಹೊರತೆಗೆದು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

​ಸ್ಥಳಕ್ಕೆ ಭೇಟಿ ನೀಡಿರುವ ಕಾರ್ಕಳ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಹಾಗೂ ಗಾಯಾಳುಗಳ ಸದ್ಯದ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.



image