ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಾದ್ಯಂತ ವಿವಿಧೆಡೆ ವಿಜೃಂಭಣೆಯಿಂದ ಜರುಗಿದ ವಿಶ್ವಕರ್ಮ ಪೂಜೆ ಹಾಗೂ ವಿಶ್ವಕರ್ಮ ಯಜ್ಞ ಕಾರ್ಯಕ್ರಮಗಳಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಮುಖ್ಯ ಅಭ್ಯಾಗತರಾಗಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ, ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ ಮಡಂತ್ಯಾರು ಹಾಗೂ ನಾರಾವಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಈ ಧಾರ್ಮಿಕ ಸಮಾರಂಭದಲ್ಲಿ ಶಾಸಕರು ಭಾಗವಹಿಸಿ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು. ಇದೇ ವೇಳೆ ಸಮಾಜದ ಮುಖಂಡರು ಹಾಗೂ ಸಂಘಟಕರೊಂದಿಗೆ ಚರ್ಚಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಮುದಾಯದ ವಿವಿಧ ಗಣ್ಯರು, ಧಾರ್ಮಿಕ ಕ್ಷೇತ್ರದ ಪ್ರಮುಖರು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದರು.
