ಬೆಳ್ತಂಗಡಿ: ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಸುಸಂದರ್ಭದಲ್ಲಿ ಹಮ್ಮಿಕೊಳ್ಳಲಾದ 'ಸೇವಾ ಸಂಕಲ್ಪ ಅಭಿಯಾನ'ದ ಭಾಗವಾಗಿ, ಶಾಸಕ ಹರೀಶ್ ಪೂಂಜ ಅವರು ಗರ್ಡಾಡಿಯ ಪ್ರಸಿದ್ಧ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.
ಪ್ರಧಾನಿ ಮೋದಿ ಅವರ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಹಾಗೂ ದೇಶಸೇವೆಗಾಗಿ ಇನ್ನಷ್ಟು ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿ ಈ ಧಾರ್ಮಿಕ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಈ ಶುಭ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಬಿಜೆಪಿ ಪಕ್ಷದ ವಿವಿಧ ಘಟಕಗಳ ಪ್ರಮುಖರು, ಶ್ರೀ ನರೇಂದ್ರ ಮೋದಿ ಅವರ ಅಪಾರ ಅಭಿಮಾನಿಗಳು ಹಾಗೂ ಗರ್ಡಾಡಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.

