ದಕ್ಷಿಣ ಕನ್ನಡ

ಉಜಿರೆ : ವಲಯ ಮಟ್ಟದ ಖೋ-ಖೋ ಪಂದ್ಯಾವಳಿ: ಅನುಗ್ರಹ ಶಾಲೆಗೆ ಕ್ರೀಡಾ ಕಿರೀಟ, ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ



ಉಜಿರೆ:

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಉಜಿರೆ ವಲಯ ಮಟ್ಟದ 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ಆತಿಥೇಯ ಅನುಗ್ರಹ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಅತ್ಯುತ್ತಮ ಸಾಧನೆ ಮಾಡಿದೆ.

​ಈ ಕ್ರೀಡಾಕೂಟವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿತ್ತು.



​ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂ| ಫಾ. ಅಬೆಲ್ ಲೋಬೊ ಅವರು ಪಂದ್ಯಾವಳಿಯನ್ನು ಉದ್ಘಾಟಿಸಿ ಕ್ರೀಡಾಪಟುಗಳನ್ನು ಹುರಿದುಂಬಿಸಿ, ಶುಭ ಹಾರೈಸಿದರು.

​ಪಂದ್ಯಾಟದ ಫಲಿತಾಂಶ:

  • ​ಬಾಲಕಿಯರ ವಿಭಾಗ: ಅತ್ಯುತ್ತಮ ಪ್ರದರ್ಶನ ನೀಡಿದ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ (ಉಜಿರೆ) ಪ್ರಥಮ ಸ್ಥಾನ ಪಡೆದುಕೊಂಡರೆ, ತೋಟತ್ತಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
  • ​ಬಾಲಕರ ವಿಭಾಗ: ಮುಂಡಾಜೆಯ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ ಗಳಿಸಿದರೆ, ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ (ಉಜಿರೆ) ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿತು.

​

ಈ ಕ್ರೀಡಾಕೂಟದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ವಂ| ಫಾ. ಡಾ. ವಿಜಯ್ ಲೋಬೊ ಅವರು ಸರ್ವರನ್ನೂ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಉಜಿರೆ ವಲಯ ಸಂಪನ್ಮೂಲ ಅಧಿಕಾರಿ ಶ್ರೀಮತಿ ಪ್ರತಿಮಾ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಶ್ರೀ ನಿರಂಜನ್, ನೋಡಲ್ ಅಧಿಕಾರಿ ಶ್ರೀ ದೇವಸ್ಯ ಸಿ.ಎ., ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷರಾದ ಶ್ರೀ ಪ್ರವೀಣ್ ವಿಜಯ್ ಡಿಸೋಜ ಹಾಗೂ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಸ್ಟೀವನ್ ಮೊಂತೇರೊ, ಶ್ರೀಮತಿ ಬಬಿತಾ ಮೋರಸ್ ಮತ್ತು ಶ್ರೀಮತಿ ಮರ್ಲಿನ್ ಮಿನೆಜಸ್ ಉಪಸ್ಥಿತರಿದ್ದರು.

​ಸಹಶಿಕ್ಷಕರಾದ ಗಣೇಶ್ ಅವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಮರ್ಪಿಸಿದರು.



image