ಮಂಗಳೂರು: ವಿಶ್ವ ಹಿಂದೂ ಪರಿಷತ್ (VHP) ಬಜರಂಗದಳದ ವೀರಮಾರುತಿ ಘಟಕ, ಮೊಗರು ಕುಕ್ಕಟ್ಟೆ ವತಿಯಿಂದ ವಿಶ್ವ ಹಿಂದೂ ಪರಿಷತ್‌ನ ಸ್ಥಾಪನಾ ದಿನಾಚರಣೆಯನ್ನು ಇತ್ತೀಚೆಗೆ ವಿಜೃಂಭಣೆಯಿಂದ ಆಚರಿಸಲಾಯಿತು.
ಈ ವಿಶೇಷ ಸಮಾರಂಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರು, ಸ್ಥಳೀಯ ಮುಖಂಡರು ಹಾಗೂ ಬಜರಂಗದಳದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
