ದಕ್ಷಿಣ ಕನ್ನಡ

Dharmasthala: ಮುಂಡ್ರುಪ್ಪಾಡಿ ಶಾಲೆಯ ಶಿಕ್ಷಕಿ ಚಿತ್ರಪ್ರಭಾಗೆ ಜಿಲ್ಲಾ ಮಟ್ಟದ ‘ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ಗೌರವ


ಬೆಳ್ತಂಗಡಿ: ಶಿಕ್ಷಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ನೀಡಲಾಗುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಚಿತ್ರಪ್ರಭಾ ಅವರು ಭಾಜನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಈ ಸಾಲಿನ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ.

ಗ್ರಾಮೀಣ ಭಾಗದ ಮುಂಡ್ರುಪ್ಪಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಚಿತ್ರಪ್ರಭಾ ಅವರು, ಶಿಕ್ಷಣ ಕ್ಷೇತ್ರದಲ್ಲಿ ತೋರಿದ ನಿಷ್ಠೆ ಹಾಗೂ ಶೈಕ್ಷಣಿಕ ಪ್ರಗತಿಯಲ್ಲಿ ನೀಡಿದ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.

೨೧ ಸಾಧಕ ಶಿಕ್ಷಕರಿಗೆ ಪ್ರಶಸ್ತಿಯ ಗರಿ:

ಜಿಲ್ಲೆಯಾದ್ಯಂತ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ತಲಾ 7 ಶಿಕ್ಷಕರಂತೆ ಒಟ್ಟು 21 ಸಾಧಕ ಶಿಕ್ಷಕರನ್ನು ಈ ಬಾರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ 5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು.



image