
ಕಲ್ಮಂಜ: ಸಮೀಪದ ಅಕ್ಷಯ ನಗರ ವ್ಯಾಪ್ತಿಯಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡು ಭೀತಿ ವಾತಾವರಣ ಸೃಷ್ಟಿಸಿದ್ದು, ಸ್ಥಳೀಯ ಜನತೆ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಅಕ್ಷಯ ನಗರದ ವಸತಿ ಹಾಗೂ ತೋಟದ ಪ್ರದೇಶಗಳಲ್ಲಿ ಏಕಾಏಕಿ ಪ್ರತ್ಯಕ್ಷವಾಗಿರುವ ಈ ಕಾಡಾನೆ, ಮಾನಸಿಕ ಸಮತೋಲನ ಕಳೆದುಕೊಂಡಂತೆ ಬೇಕಾಬಿಟ್ಟಿ ಓಡಾಟ ನಡೆಸುತ್ತಿದೆ ಎಂದು ಪ್ರತ್ಯಕ್ಷದರ್ಶಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಭೀತಿಕಲಿತರಾಗಿ ಮಾಹಿತಿ ನೀಡಿದ್ದಾರೆ. ಆನೆಯ ಈ ವಿಚಿತ್ರ ವರ್ತನೆಯಿಂದಾಗಿ ಸುತ್ತಮುತ್ತಲಿನ ಸಾರ್ವಜನಿಕರು ಮನೆಯಿಂದ ಹೊರಬರಲು ಹೆದರುವಂತಾಗಿದೆ.
ವಿಷಯ ತಿಳಿದ ತಕ್ಷಣವೇ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.