ದಕ್ಷಿಣ ಕನ್ನಡ

Kalmanja :ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆ: ಕಲ್ಮಂಜದ ಸಾಧಕ ನಿಶ್ಚಲ್ ಗೌಡ ರಾಜ್ಯಮಟ್ಟಕ್ಕೆ ಆಯ್ಕೆ!


ಕಲ್ಮಂಜ (ಸೆ. 08): ಇಲ್ಲಿನ ಬನದಬೈಲು ನಿವಾಸಿ ನಿಶ್ಚಲ್ ಗೌಡ ಅವರು ಸುಳ್ಯದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸಿದ್ದು, ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾರೆ.

​ದಿನೇಶ್ ಗೌಡ ಹಾಗೂ ಸುಶ್ಮಿತಾ ಗೌಡ ದಂಪತಿಯ ಪುತ್ರರಾಗಿರುವ ನಿಶ್ಚಲ್ ಗೌಡ, ಸ್ಥಳೀಯ ಸ.ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ (ಕಲ್ಮಂಜ-ನಿಡಿಗಲ್) ಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕಠಿಣ ಅಭ್ಯಾಸ ಹಾಗೂ ಯೋಗದಲ್ಲಿನ ನಿರಂತರ ಆಸಕ್ತಿಯಿಂದ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಅಲಂಕರಿಸಿ ಊರಿಗೆ ಕೀರ್ತಿ ತಂದಿದ್ದಾರೆ.

​ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕ ವೃಂದ, ಶಾಲಾ ಆಡಳಿತ ಮಂಡಳಿ (SDMC), ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದು, ಭವಿಷ್ಯದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಇನ್ನಷ್ಟು ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.



image