ದಕ್ಷಿಣ ಕನ್ನಡ

Mangalore : ಸಚಿವರಿಗೆ SDPI ಕಪ್ಪುಬಾವುಟ ಪ್ರದರ್ಶನ: ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನಾಕಾರರ ಬಂಧನ



​ಮಂಗಳೂರು: ನಗರದಲ್ಲಿ ರಾಜ್ಯ ಸರ್ಕಾರದ ಸಂಪುಟ ಸಭೆ ನಡೆಯುತ್ತಿರುವ ಬೆನ್ನಲ್ಲೇ, ಸರ್ಕಾರದ ನಡೆ ಹಾಗೂ ವೈಫಲ್ಯಗಳನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಾರ್ಯಕರ್ತರು ಮಂಗಳೂರಿನ ಕ್ಲಾಕ್ ಟವರ್ ಜಂಕ್ಷನ್ ಬಳಿ ಮಂಗಳವಾರ ದಿಢೀರ್ ಪ್ರತಿಭಟನೆ ನಡೆಸಿ, ಸಚಿವರಿಗೆ ಕಪ್ಪುಬಾವುಟ ಪ್ರದರ್ಶಿಸಿದ್ದಾರೆ.

​ಕೊಳ್ತಮಜಲು ನಿವಾಸಿ ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿದರು.

​


ಕ್ಲಾಕ್ ಟವರ್ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆಯೇ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಕಪ್ಪುಬಾವುಟ ಪ್ರದರ್ಶಿಸಿ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ SDPI ಸಂಘಟನೆಯ ಪ್ರಮುಖ ಜಿಲ್ಲಾ ಹಾಗೂ ರಾಜ್ಯ ಮಟ್ಟದ ನಾಯಕರನ್ನು ವಶಕ್ಕೆ ಪಡೆದು, ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.



image