
ಸುಳ್ಯ: ಮಂಗಳೂರಿನಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯು ಆಯೋಜಿಸಿದ್ದ ಜಿಲ್ಲಾ ಮಟ್ಟದ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರದ ವಿವೇಕಾನಂದ ವಿದ್ಯಾಸಂಸ್ಥೆಯ ಪುಟಾಣಿ ಬುಲ್ ಬುಲ್ ತಂಡವು ತೃತೀಯ ಬಹುಮಾನ ಪಡೆದುಕೊಂಡು ಸಾಧನೆ ಮಾಡಿದೆ.
ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಶಾಲೆ ಹಾಗೂ ಪ್ರದೇಶಕ್ಕೆ ಕೀರ್ತಿ ತಂದಿರುವ ಈ ಸಾಧಕ ವಿದ್ಯಾರ್ಥಿಗಳನ್ನು ಮತ್ತು ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿದ ತರಬೇತುದಾರರನ್ನು ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗ ಮತ್ತು ಪೋಷಕರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ.