ಬೆಳಾಲು: ಇಲ್ಲಿನ ಪ್ರಸಿದ್ಧ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿಯಲ್ಲಿ ಡಿಸೆಂಬರ್ 25 ಮತ್ತು 26 ರಂದು ವಿಜೃಂಭಣೆಯಿಂದ ನಡೆಯಲಿರುವ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ನರ್ತನ ಸೇವೆಯ ಸಿದ್ಧತೆಗಳ ಕುರಿತು 2ನೇ ಪೂರ್ವಭಾವಿ ಸಭೆಯು ದೇವಸ್ಥಾನದ ಅಕ್ಷೋಭ್ಯ ಸಭಾಭವನದಲ್ಲಿ ಜರುಗಿತು. ಇದೇ ವೇಳೆ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಾತ್ರಾಮಹೋತ್ಸವದ ಪ್ರಧಾನ ಸಂಚಾಲಕಿ ಸರೋಜಿನಿ ಭೀಮಂಡೆ, ದೇವಸ್ಥಾನದ ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿ ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೇರ್ಮುನ್ನಾಯ, ಬೆಳಾಲುಗುತ್ತು ಮನೆಯ ಹೇಮಲತಾ ಜೀವಂಧರ ಕುಮಾರ್ ಜೈನ್, ವ್ಯವಸ್ಥಾಪನಾ ಸಮಿತಿ ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ ಉಪ್ಪಾರು ಹಾಗೂ ಮಹಿಳಾ ಸಮಿತಿ ಅಧ್ಯಕ್ಷೆ ಹೇಮಲತಾ ಶ್ರೀನಿವಾಸ್ ಉಪಸ್ಥಿತರಿದ್ದರು.
ಸಭೆಯಲ್ಲಿ ಮಹಿಳಾ ಸಮಿತಿಯ ಗೌರವಾಧ್ಯಕ್ಷೆ ವಿದ್ಯಾ ಶ್ರೀನಿವಾಸ್, ವಿವಿಧ ಬೈಲುವಾರು ಸಮಿತಿಯ ಸಂಚಾಲಕರು, ಸದಸ್ಯರು ಹಾಗೂ ಊರಿನ ಪ್ರಮುಖರಾದ ದೇಜಪ್ಪ ಗೌಡ ಅರಣೆಮಾರು, ಸುಂದರ ಎಂ.ಕೆ., ಜಾರಪ್ಪ ಗೌಡ ಅರಣೆಮಾರು, ಬಾಬು ಆಚಾರ್ಯ ಸೀತಾರಾಮ ಬಿ.ಎಸ್., ಶ್ರೀನಿವಾಸಗೌಡ ಗಣಪನಗುತ್ತು, ಶಿವಕುಮಾರ್ ಬಾರಿತ್ತಾಯ ಪಾರಳ ಸೇರಿದಂತೆ ಅನಂತೇಶ್ವರ ಭಜನಾ ಮಂಡಳಿ, ಅನಂತೇಶ್ವರ ಫ್ರೆಂಡ್ಸ್ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ವ್ಯವಸ್ಥಾಪನಾ ಸಮಿತಿಯ ಖಾಯಂ ಆಹ್ವಾನಿತ ಸದಸ್ಯ ಕಿರಣ್ ಸುವರ್ಣ ಇರಂತ್ಯಾರು ಸ್ವಾಗತಿಸಿದರು. ದೇವಸ್ಥಾನದ ಕಚೇರಿ ಮೇಲ್ವಿಚಾರಕ ಶಿವಪ್ರಸಾದ್ ಗೊಲ್ಲ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


