ದಕ್ಷಿಣ ಕನ್ನಡ

ಕಲ್ಮಂಜ: ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಕಾರು; ಆರು ಮಂದಿ ಸಣ್ಣ ಪುಟ್ಟ ಗಾಯದಿಂದ ಪಾರು



ಬೆಳ್ತಂಗಡಿ: ಚಾರ್ಮಾಡಿಯಿಂದ ಉಜಿರೆ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಲ್ಮಂಜ ಗ್ರಾಮದ ನಿಡಿಗಲ್ ಸೇತುವೆ ಬಳಿ ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ಇಂದು ಮುಂಜಾನೆ (ನ.12) ನಡೆದಿದೆ.

​ಬೆಳಗಾವಿ ಮೂಲದ KA-22-MF-2732 ನೋಂದಣಿ ಸಂಖ್ಯೆಯ ಕಾರಿನಲ್ಲಿ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿದ್ದು, ಎಲ್ಲರೂ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

​ಅತಿವೇಗ ಅಥವಾ ಚಾಲಕನಿಗೆ ನಿದ್ದೆಮಂಪರು ಬಂದಿದ್ದೇ ಈ ಅಪಘಾತಕ್ಕೆ ಕಾರಣವಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಮಗುಚಿ ಬಿದ್ದಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ.