ದಕ್ಷಿಣ ಕನ್ನಡ

ಬೆಳ್ತಂಗಡಿ: ಕಾಂಗ್ರೆಸ್‌ಗೆ ಶಾಕ್; ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಪ್ರಮುಖ ಕಾರ್ಯಕರ್ತರು



ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ತತ್ವ-ಸಿದ್ಧಾಂತಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಪುದುವೆಟ್ಟು ಗ್ರಾಮದ ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕರ್ತರು ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

​ಸ್ಥಳೀಯ ಶಾಸಕರಾದ ಹರೀಶ್ ಪೂಂಜಾ ಅವರ ಅಭಿವೃದ್ಧಿ ಕಾರ್ಯಗಳು ಮತ್ತು ಜನಪರ ಕಾಳಜಿಯಿಂದ ಪ್ರಭಾವಿತರಾಗಿರುವ ಈ ಕಾರ್ಯಕರ್ತರು, ರಾಜ್ಯ ಸರ್ಕಾರದ ಭ್ರಷ್ಟ ಹಾಗೂ ಜನವಿರೋಧಿ ನೀತಿಗಳು ಹಾಗೂ ತಾಲೂಕು ಕಾಂಗ್ರೆಸ್ ನಾಯಕತ್ವದ ಅಸಮರ್ಥತೆಯೇ ತಮ್ಮ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದ್ದಾರೆ.

​ಬಿಜೆಪಿಗೆ ಸೇರ್ಪಡೆಗೊಂಡ ಪ್ರಮುಖರು:

​ಬಿಜು (ಕಾಂಗ್ರೆಸ್ ಕಾರ್ಯಕರ್ತರು)

​ಶಿಜಿ (ಕಾಂಗ್ರೆಸ್ ಕಾರ್ಯಕರ್ತರು)

​ಪೌಲೋಸ್ (ಕಾಂಗ್ರೆಸ್ ಕಾರ್ಯಕರ್ತರು)

​ಶಾಸಕ ಹರೀಶ್ ಪೂಂಜಾ ಅವರು ಹಾರ ಹಾಕಿ, ಪಕ್ಷದ ಬಾವುಟ ನೀಡಿ ಹೊಸ ಕಾರ್ಯಕರ್ತರನ್ನು ಭಾರತೀಯ ಜನತಾ ಪಕ್ಷಕ್ಕೆ ಆದರದಿಂದ ಬರಮಾಡಿಕೊಂಡರು.

​ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ್ ಗೌಡ, ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಗೌಡ, ಮಂಡಲ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ, ಪುದುವೆಟ್ಟು ಶಕ್ತಿ ಕೇಂದ್ರ ಅಧ್ಯಕ್ಷ ಪೂರ್ಣಾಕ್ಷ ಸೇರಿದಂತೆ ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.