ದಕ್ಷಿಣ ಕನ್ನಡ

ಪುತ್ತೂರು: ಅಲಂಕಾರ ನೆಕ್ಕರೆ: ಕಾರು–ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ; ಕಡಬದ ಯುವಕ ದುರ್ಮರಣ, ಮತ್ತೊಬ್ಬನಿಗೆ ಗಂಭೀರ ಗಾಯ



ಪುತ್ತೂರು: ಕಡಬ–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಅಲಂಕಾರ ಸಮೀಪದ ನೆಕ್ಕರೆ ಬಳಿ ಶುಕ್ರವಾರ (ನ.14) ಮುಂಜಾನೆ ಸಂಭವಿಸಿದ ಭೀಕರ ಕಾರು ಮತ್ತು ಹಣ್ಣು ಸಾಗಾಟದ ಗೂಡ್ಸ್ ವಾಹನದ ಅಪಘಾತದಲ್ಲಿ ಕಡಬ ಮೂಲದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

​ಅಪಘಾತದ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಡಿಕ್ಕಿಯ ಶಬ್ದ ಕೇಳಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯ ಸಾರ್ವಜನಿಕರು ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳು ವ್ಯಕ್ತಿಯನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

​ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಾಥಮಿಕ ತನಿಖೆ ಕೈಗೊಂಡಿದ್ದಾರೆ. ಮೃತ ಯುವಕನ ನಿಖರ ಗುರುತು ಹಾಗೂ ಅಪಘಾತಕ್ಕೆ ದಾರಿ ಮಾಡಿಕೊಟ್ಟ ಕಾರಣಗಳ ಕುರಿತು ಪೊಲೀಸ್ ತನಿಖೆಯಿಂದಷ್ಟೇ ಹೆಚ್ಚಿನ ವಿವರಗಳು ಹೊರಬರಬೇಕಿದೆ.